ಚಿಕ್ಕಮಗಳೂರು : ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಗರದಲ್ಲಿ ನಡೆದಿದೆ.
ಮೋದಿ ಗೋ ಬ್ಯಾಕ್ ಘೋಷಣೆ ಕೂಗಲು 10ಕ್ಕೂ ಹೆಚ್ಚು ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನತ್ತ ಹೊರಡಲು ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಸೇರಿದ್ದರು. ವಿಷಯ ತಿಳಿದ ಪೊಲೀಸರು ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.










