ಚಿಕ್ಕಮಗಳೂರು:ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಕಾರು…

220
firstsuddi
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಫಿತೋಟಕ್ಕೆ ನುಗ್ಗಿ ಪಲ್ಟಿಯಾಗಿ, ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿರೋ ಘಟನೆ  ತಾಲೂಕಿನ ತುಡುಕೂರು ಗೇಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಏಕಏಕಿ ಕಾರು ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ.  ಘಟನೆಯಲ್ಲಿ ಚಾಲಕ ನಿತೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.