ಚಿಕ್ಕಮಗಳೂರು : ಅಂಗನವಾಡಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ 3ವರ್ಷದ ಮಗುವಿನ ಮೇಲೆ ಚಾಕುವಿನಿಂದ ಹಲ್ಲೆ…

550
firstsuddi

ಚಿಕ್ಕಮಗಳೂರು : ಅಂಗನವಾಡಿಯಲ್ಲಿ ಮೂರು ವರ್ಷದ ಮಗು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶಿಕ್ಷಕಿ ಹಾಗೂ ಸಹಾಯಕಿ ಮಗುವಿನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ತಾಲ್ಲೂಕಿನ ಕೆರಮಕ್ಕಿ ಗ್ರಾಮದಲ್ಲಿ ನಡೆದಿದೆ. ಅಮಿತ್(3) ಹಲ್ಲೆಗೊಳಗಾದ ಮಗು ಎಂದು ಗುರುತಿಸಲಾಗಿದ್ದು, ಅಂಗನವಾಡಿಯಲ್ಲಿ ಮಗು ಚಡ್ಡಿಯಲ್ಲಿ ಮೂತ್ರ ವಿಸರ್ಜನೆ ಮಾಡಿದೆ ಎಂಬ ಕಾರಣಕ್ಕೆ ಕೋಪಗೊಂಡ ಶಿಕ್ಷಕಿ ಮಾಲಾ ಹಾಗೂ ಸಹಾಯಕಿ ಮಂಜುಳ ಎಂಬುವವರು ಮಗುವಿನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು, ಪರಿಣಾಮ ಮಗುವಿನ ತಲೆಗೆ ಗಂಭೀರ ಗಾಯವಾಗಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಶಿಕ್ಷಕಿ ಮಾಲಾ ಹಾಗೂ ಸಹಾಯಕಿ ಮಂಜುಳ ಅವರ ವಿರುದ್ಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷಕಿ ಹಾಗೂ ಸಹಾಯಕಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.