ಚಿಕ್ಕಮಗಳೂರು : ಆಜಾದ್ ಪಾರ್ಕ್ ಸಾರ್ವಜನಿಕ ಗಣಪತಿ ಉತ್ಸವದ ಪೆಂಡಾಲ್ ನಿರ್ಮಾಣ ಕಾಮಗಾರಿ ಆರಂಭ…

243
firstsuddi

ಚಿಕ್ಕಮಗಳೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಆಜಾದ್ ಪಾರ್ಕ್ ಸಾರ್ವಜನಿಕ ಗಣಪತಿ ಉತ್ಸವದ ಪೆಂಡಾಲ್ ನಿರ್ಮಾಣ ಕಾಮಗಾರಿ ನಗರದ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಭಾನುವಾರ ಆರಂಭಗೊಂಡಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ್ ಭೂಮಿ ಪೂಜೆ ನೆರವೇರಿಸಿದರು, ಆಜಾದ್ ಪಾರ್ಕ್ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಎನ್.ಈಶ್ವರಪ್ಪ ಕೋಟೆ ಅವರ ಕುಟುಂಬವರ್ಗ ಬೆಳಿಗ್ಗೆ ಗಂಗಾ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿತು.
ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಸಮಿತಿಯ ಅಧ್ಯಕ್ಷ ಎನ್.ಈಶ್ವರಪ್ಪ ಕೋಟೆ ಈ ಬಾರಿ ಎಂಟು ಅಡಿ ಎತ್ತರದ ಶ್ರೀ ಪ್ರಸನ್ನ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು, 25 ದಿನಗಳ ಕಾಲ ಪೂಜೆಯ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಗಣಪತಿ ಹೋಮ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದ್ದು, ಉತ್ಸವಕ್ಕಾಗಿ ಈಗಾಗಲೇ ವಿಗ್ರಹದ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ, ಆಜಾದ್ ಪಾರ್ಕ್ ಗಣಪತಿ ಸಮಿತಿಯ ಮಾಜಿ ಅಧ್ಯಕ್ಷ ಎಲ್.ವಿ.ಬಸವರಾಜು, ಹಾಲಿ ಗೌರವಾಧ್ಯಕ್ಷ ಸಿ.ಆರ್.ಕೇಶವಮೂರ್ತಿ, ಕಾರ್ಯಾಧ್ಯಕ್ಷ ಸಿ.ಎಸ್.ಕುಬೇರ, ಉಪಾಧ್ಯಕ್ಷರಾದ ವರಸಿದ್ದಿ ವೇಣುಗೋಪಾಲ್, ಗಿರಿಧರ್ ಯತೀಶ್, ಶ್ರೀದೇವಿ ಮೋಹನ್, ಕಾರ್ಯದರ್ಶಿ ಶಿವಶಂಕರ್, ಖಜಾಂಚಿ ಹೆಚ್.ಕೆ.ಮಂಜನಾಥ್, ಪ್ರಕಾಶ್, ವಿಗ್ರಹ ಶಿಲ್ಪಿ ಏಕಾಂತರಾಮು ಹಾಜರಿದ್ದರು.