ಚಿಕ್ಕಮಗಳೂರು : ಇಂದು ಶೃಂಗೇರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ…

375
firstsuddi

ಚಿಕ್ಕಮಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇಂದು ಶೃಂಗೇರಿಗೆ ಆಗಮಿಸಲಿದ್ದು, ಆದಿಶಕ್ತಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯಾಹ್ನ 3ಗಂಟೆಗೆ ಮಂಗಳೂರಿನಿಂದ ಶೃಂಗೇರಿಗೆ ಆಗಮಿಸಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಅವರ ಪತ್ನಿ ಚನ್ನಮ್ಮ ಅವರು ಶಾರದಾಂಬೆಗೆ ವಿಶೇಷ ಪೂಜೆ ಹಾಗೂ ಹೋಮ ಹವನ ನಡೆಸಲಿದ್ದು, ಇಂದಿನಿಂದ ಜ.21 ರವೆಗೆ ಶೃಂಗೇರಿ ಶಾರದಾ ದೇವಾಲಯದ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.