ಚಿಕ್ಕಮಗಳೂರು : ನಗರದ ಇತಿಹಾಸ ಪ್ರಸಿದ್ದ ಶ್ರೀ ಬೋಳರಾಮೇಶ್ವರ ದೇವಾಲಯದಲ್ಲಿ ವಾರ್ಷಿಕ ಕಾರ್ತೀಕ ದೀಪೋತ್ಸವ ನೂರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.
ದೀಪೋತ್ಸವದ ಪ್ರಯುಕ್ತ ಬೆಳಿಗ್ಗೆ ದೇವಾಲಯದ ಅಧಿದೇವತೆಗಳಿಗೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ ಜರುಗಿತು, ಸಂಜೆಯಾಗುತ್ತಿದ್ದಂತೆ ದೇವಾಲಯಕ್ಕೆ ಆಗಮಿಸಿದ ನೂರಾರು ಭಕ್ತರು ಆವರಣದಲ್ಲಿ ಸಾಮೂಹಿಕವಾಗಿ ಸಹಸ್ರಾರು ದೀಪದ ಹಣತೆಗಳನ್ನು ಹಚ್ಚಿ ಸಂಭ್ರಮಿಸಿದರು.
ರಾತ್ರಿ 8 ಗಂಟೆಗೆ ಮಹಾಮಂಗಳಾರತಿಯೊಂದಿಗೆ ಪ್ರಧಾನ ಅರ್ಚಕ ಡಿ.ಆರ್.ಕುಮಾರಸ್ವಾಮಿ ಅವರು ವೇದ ಘೋಷ, ಮಂತ್ರ ಪಠಣದ ನಡುವೆ ದೇವಾಲಯದ ಮುಂಭಾಗದಲ್ಲಿ ಕಾರ್ತಿಯನ್ನು ಬೆಳಗಿಸಿದರು.
ನಂತರ ದೇವಾಲಯದ ಅಧಿದೇವತೆಗಳಿಗೆ ರಕ್ಷೆಯನ್ನು ಹಚ್ಚಲಾಯಿತು, ಪ್ರಸಾದ ವಿನಿಯೋಗ ಮಾಡಲಾಯಿತು, ಕಾರ್ತಿಕ ಮಾಸದ ಕೊನೆಯ ದಿನವಾದ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲ ಗ್ರಾಮಗಳ ಸಹಸ್ರಾರು ಭಕ್ತರು ಬೆಳಗಿನಿಂದ ಸಂಜೆಯವರೆಗೆ ದೇವಾಲಯಕ್ಕೆ ತೆರಳಿ ಪೂಜೆ. ಪ್ರಾರ್ಥನೆ ಸಲ್ಲಿಸಿದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಇತಿಹಾಸ ಪ್ರಸಿದ್ದ ಶ್ರೀ ಬೋಳರಾಮೇಶ್ವರ ದೇವಾಲಯದಲ್ಲಿ ವಾರ್ಷಿಕ ಕಾರ್ತೀಕ ದೀಪೋತ್ಸವ…










