ಚಿಕ್ಕಮಗಳೂರು : ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು…

2004
firstsuddi

ಚಿಕ್ಕಮಗಳೂರು : ಈಜಲು ತೆರಳಿದ್ದ ಮೂವರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಿಳೇಕಲ್ಲಳ್ಳಿ ಗ್ರಾಮದ ಕಂಚಿಕೆಟ್ಟೆ ಕೆರೆಯಲ್ಲಿ ನಡೆದಿದೆ. ಹೌಸಿಂಗ್ ಬೋರ್ಡ್ ನಿವಾಸಿಗಳಾದ ಮುರುಳಿ(15), ಜೀವಿತ್(14) ಹಾಗೂ ಚಿರಾಗ್(15) ಮೃತ ಬಾಲಕರು ಎಂದು ಗುರುತಿಸಲಾಗಿದ್ದು, ನಿನ್ನೆ ಸಂಜೆ ಆಯುಧ ಪೂಜೆ ಸಂಭ್ರಮದಲ್ಲಿ ತಮ್ಮ ಸೈಕಲ್‍ನ್ನು ತೊಳೆದು ಈಜಲು ತೆರಳಿದ್ದರು. ಈ ವೇಳೆ ಮೂವರು ಬಾಲಕರು ನೀರುಪಾಲಾಗಿದ್ದಾರೆ. ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬ ಬಾಲಕನ ಮೃತದೇಹಕ್ಕಾಗಿ ಪೊಲೀಸರು ಹಾಗೂ ಸ್ಥಳೀಯರು ಶೋಧಕಾರ್ಯ ನಡೆಸುತ್ತಿದ್ದು, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.