ಚಿಕ್ಕಮಗಳೂರು: ಎರಡು ಗುಂಪಿನ ಯುವಕರ ನಡುವೆ ಗಲಾಟೆ- ದೂರು ಪ್ರತಿ ದೂರು ದಾಖಲು…

74
firstsuddi

ಚಿಕ್ಕಮಗಳೂರು: ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಹುಡುಗಿಯರಿಗೆ ಬಣಕಲ್ ಮೂಲದ ಯುವಕನೋರ್ವ ಡೈರಿ ಮಿಲ್ಕ್ ಚಾಕಲೇಟ್ ಕೊಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಯುವಕರ ನಡುವೆ ನಡೆದಿರುವ ಗಲಾಟೆ ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರು ದಾಖಲಿಸಲಾಗಿದೆ.

ನಿನ್ನೆ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕ ಚಾಕ್ಲೇಟ್ ನೀಡುತ್ತಿದ್ದ ಎಂಬ ಕಾರಣಕ್ಕೆ ನಾಲ್ಕೈದು ಯುವಕರು ಅನ್ಯ ಕೋಮಿನ ಯುವಕನನ್ನ ಅಟ್ಟಾಡಿಸಿಕೊಂಡು ಹೊಡೆದಿದ್ದರು. ಯುವಕರ ಈ ಗಲಾಟೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಯುವಕರ ತಂಡ ಯುವಕನ ಮೇಲೆ ಹಲ್ಲೆ ಮಾಡುತ್ತಿದ್ದಂತೆ ಬಸ್ ನಿಲ್ದಾಣದ ಟಿಸಿಯಿಂದ ಸಮಯ ಪ್ರಜ್ಞೆಯಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪಿಎಸೈ ಮತ್ತು ಸಿಬ್ಬಂದಿಗಳು ಐವರು ಯುವಕರನ್ನ ವಶಕ್ಕೆ ಪಡೆದು ಮುಂದಾಗುವ ಅನಾಹುತವನ್ನ ತಪ್ಪಿಸಿದ್ದಾರೆ. ಹಲ್ಲೆಗೊಳಗಾದ ಯುವಕರು ಆಸ್ಪತ್ರೆಗೆ ದಾಖಲಾಗಿದ್ದರು. ಯುವಕರ ಈ ನೈತಿಕ ಪೊಲೀಸ್ ಗಿರಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪಟ್ಟಣಕ್ಕೆ ಹೆಚ್ಚುವರಿ ಪೊಲೀಸ್ ವ್ಯಾನ್ ತರಿಸಿ ಬಸ್‍ಸ್ಟ್ಯಾಂಡ್ ಸಮೀಪ ನಿಯೋಜಿಸಲಾಗಿದೆ. ಮೂಡಿಗೆರೆ ಬಸ್‍ಸ್ಟ್ಯಾಂಡ್ ಸಮೀಪ ಪಡ್ಡೆ ಹುಡುಗರ ಹಾವಳಿ ಹೆಚ್ಚಾಗಿದ್ದು, ಇಂತಹ ಘಟನೆ ನಡೆಯಲು ಕಾರಣವಾಗಿದೆ. ಕೆಲವು ಯುವಕರು ಬಸ್‍ಸ್ಟ್ಯಾಂಡ್ ಒಳಗೆ ಮತ್ತು ಹೊರಗೆ ಅನಾವಶ್ಯಕವಾಗಿ ತಿರುಗಾಡುತ್ತಾ ಕಿರಿಕಿರಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆರೋಪಗಳು ಕೇಳಿ ಬರುತ್ತಿವೆ.