ಚಿಕ್ಕಮಗಳೂರು : ಕರಡಿಗವಿಮಠದ ಶ್ರೀ ಶಂಕರಾನಂದ ಸ್ವಾಮೀಜಿ ನಿಧನ…

232
firstsuddi

ಚಿಕ್ಕಮಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕರಡಿಗವಿಮಠದ ಶ್ರೀ ಶಂಕರಾನಂದ ಸ್ವಾಮೀಜಿ(60) ಇಂದು ನಿಧನರಾಗಿದ್ದು, ಕೆಲವು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶ್ರೀಗಳು ಚಿಕಿತ್ಸೆಗೆ ಸ್ಪಂಧಿಸುತ್ತಿಲ್ಲ ಎಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮಠಕ್ಕೆ ಕರೆತರಲಾಗಿತ್ತು. ಇಂದು ಮಠಕ್ಕೆ ಕರೆತಂದ ಒಂದು ಘಂಟೆಯಲ್ಲೇ ಶ್ರೀಗಳು ಲಿಂಗೈಕ್ಯರಾಗಿದ್ದು, ಭಕ್ತರಿಗೆ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶ್ರೀಗಳ ಅಂತ್ಯಸಂಸ್ಕಾರ ನಾಳೆ ಮಠದ ಸಂಪ್ರದಾಯದಂತೆ ನೆರವೇರಲಿದೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.