ಚಿಕ್ಕಮಗಳೂರು : ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ಸಿಎಂ ಬೆಂಗಾವಲು ವಾಹನ ಪಲ್ಟಿ-ಸಿಬ್ಬಂಧಿಗೆ ಗಾಯ…

161
firstsuddi

ಚಿಕ್ಕಮಗಳೂರು : ಮುಖ್ಯಮಂತ್ರಿಗಳ ಬೆಂಗಾವಲು ವಾಹನ ಪಲ್ಟಿಯಾಗಿ ಸಿಬ್ಬಂಧಿಗಳಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಜೇನುಗದ್ದೆ ಬಳಿ ನಡೆದಿದೆ. ಮಂಗಳೂರಿನಿಂದ ಕರ್ತವ್ಯ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಪೊಲೀಸ್ ವಾಹನ ಜೇನುಗದ್ದೆ ಬಳಿ ಬರುತ್ತಿದ್ದಂತೆ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದ್ದು, ಪರಿಣಾಮ ವಾಹನದಲ್ಲಿದ್ದ ಇಬ್ಬರು ಸಿಬ್ಬಂಧಿಗಳು ಹಾಗೂ ವಾಹನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.