ಚಿಕ್ಕಮಗಳೂರು : ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆರ್.ಸೋಮಾನಾಯಕ್ ಆಯ್ಕೆ…

100
firstsuddi

ಚಿಕ್ಕಮಗಳೂರು : ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಗರದ ಆರ್.ಸೋಮಾನಾಯಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿಕಟ ಪೂರ್ವ ಅಧ್ಯಕ್ಷ ಕನ್ನಡ ಸಿರಿ ಅನಂತಕುಮಾರ್ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಘಟನೆಯ ಕಛೇರಿಯಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರೂ ಸ್ಪರ್ಧಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಸೋಮಣ್ಣ ಅವರು ಸೋಮಾನಾಯಕ್ ಅವರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.