ಚಿಕ್ಕಮಗಳೂರು : ಕುವೆಂಪು ವಿವಿಯ ಸಹಾಯಕ ಪ್ರಾಧ್ಯಾಪಕ ಡಾ|| ಎ.ಷಣ್ಮುಖ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯ…

330
firstsuddi

ಚಿಕ್ಕಮಗಳೂರು : ಕುವೆಂಪು ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ|| ಎ.ಷಣ್ಮುಖ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ವಾಲ್ಮೀಕಿ ನಾಯಕ ಸಂಘ ಒತ್ತಾಯಿಸಿದೆ.
ವಿಶ್ವವಿದ್ಯಾನಿಲಯದ ಕುಲಸಚಿವ ಎಸ್.ಎಸ್.ಪಾಟೀಲ್ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಮತ್ತು ವಾಲ್ಮೀಕಿ ಸಮುದಾಯದ ಮುಖಂಡರು ಈ ಸಂಬಂಧ ಮನವಿ ಸಲ್ಲಿಸಿದರು.
ಡಾ|| ಎ.ಷಣ್ಮುಖ ಅವರು ತಾವು ವಾಲ್ಮೀಕಿ ನಾಯಕ ಜನಾಂಗದವರು ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪರಿಶಿಷ್ಠ ಪಂಗಡದ ಕೋಟಾದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಪಡೆದಿದ್ದಾರೆ ಎಂದು ಆರೋಪಿಸಿದ ಪದಾಧಿಕಾರಿಗಳು ಈ ಸಂಬಂಧ ಕುಲಸಚಿವರಿಗೆ ದಾಖಲಾತಿಗಳನ್ನು ನೀಡಿದರು.
ಡಾ|| ಎ.ಷಣ್ಮುಖ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವುದು ಸಾಬೀತಾಗಿದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ವಿಚಾರಣಾ ವರದಿಯ ಅನ್ವಯ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಈಗಾಗಲೇ ರದ್ದುಪಡಿಸಲಾಗಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ಡಾ|| ಎ.ಷಣ್ಮುಖ ಅವರನ್ನು ಸೇವೆಯಿಂದ ವಜಾ ಮಾಡಬೇಕು, ಅವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಜಿ.ಕೆ.ಭೀಮಪ್ಪ, ಕಡೂರು ತಾಲ್ಲೂಕು ಅಧ್ಯಕ್ಷ ನಂದೀಶ್ ಮದಕರಿ, ಪದಾಧಿಕಾರಿಗಳಾದ ಬಸವರಾಜ್, ರಮೇಶ್, ಗುರುಮೂರ್ತಿ ಹಾಜರಿದ್ದರು.