ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…

239
firstsuddi

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಬಾಲಕ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಿಕ್ಕಗೌಜ ಗ್ರಾಮದ ಸುಂಕದಕಟ್ಟೆಯಲ್ಲಿ ನಡೆದಿದೆ. ಸಾದರಹಳ್ಳಿ ಗ್ರಾಮದ ನಿವಾಸಿ ವರುಣ್(15) ಮೃತ ಬಾಲಕ ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.