ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಎಸ್.ಆರ್.ಎಸ್. ಖಾಸಗಿ ಬಸ್ ನಡುವೆ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು…

1191
firstsuddi

ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಎಸ್.ಆರ್.ಎಸ್. ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಸರ್ಕಾರಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕುಡ್ಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ತರೀಕೆರೆ, ಬೀರೂರು ಹಾಗೂ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್‍ನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ಹರಸಾಹಸ ಪಟ್ಟು ಹೊರತೆಗೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಿ.ಮೀ ಟ್ರಾಫಿಕ್ ಜಾಮ್ ಆಗಿದ್ದು, ಘಟನಾ ಸ್ಥಳಕ್ಕೆ ತರೀಕೆರೆ ಹಾಗೂ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.