ಚಿಕ್ಕಮಗಳೂರು : ಕೈಯಲ್ಲಿ ಲಾಂಗ್ ಹಿಡಿದು ಜನರಲ್ಲಿ ಆತಂಕ ಹುಟ್ಟಿಸಿದ ಅಪರಿಚಿತ…

335
firstsuddi

ಚಿಕ್ಕಮಗಳೂರು : ನಡುರಸ್ತೆಯಲ್ಲೇ ಅಪರಿಚಿತ ವ್ಯಕ್ತಿಯೊಬ್ಬರು ನಿನ್ನೆ ಸಂಜೆ ಕೈಯಲ್ಲಿ ಲಾಂಗ್ ಹಿಡಿದು ಜನರಿಗೆ ಆತಂಕ ಹುಟ್ಟಿಸಿದ ಘಟನೆ ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಕೊಪ್ಪ ಬಸ್ ಸ್ಟಾಂಡ್ ಹಾಗೂ ಮುಖ್ಯ ರಸ್ತೆಯಲ್ಲಿ ಲಾಂಗ್ ಹಿಡಿದು ಓಡಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಪರಿಚಿತ ವ್ಯಕ್ತಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.