ಚಿಕ್ಕಮಗಳೂರು : ಕೊರೋನಾ ವೈರಸ್ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಯುವ ಕಾಂಗ್ರೇಸ್ ವತಿಯಿಂದ ಜಿಲ್ಲಾಡಳಿತಕ್ಕೆ ಒತ್ತಾಯ…

680
firstsuddi

ಚಿಕ್ಕಮಗಳೂರು : ಕೊರೋನಾ ವೈರಸ್ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಯುವ ಕಾಂಗ್ರೇಸ್ ಕಾರ್ಯಕರ್ತರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ|| ಬಗಾಧಿ ಗೌತಂ ಅವರನ್ನು ಸೋಮವಾರ ಭೇಟಿ ಮಾಡಿದ ಕಾರ್ಯಕರ್ತರು ಈ ಸಂಬಂಧ ಮನವಿ ಸಲ್ಲಿಸಿದರು.
ದೇಶಾದ್ಯಂತ ಹರಡುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಜಿಲ್ಲೆಗೂ ವ್ಯಾಪಿಸುವ ಸಂಭವವಿದ್ದು ಆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಜಿಲ್ಲಾದ್ಯಂತ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಯುವ ಕಾಂಗ್ರೇಸ್ ಕಾರ್ಯಕರ್ತರು ಸದಾ ಸಿದ್ದರಿದ್ದು, ಸಿಬ್ಬಂಧಿ ಕೊರತೆ ಕಂಡು ಬಂದಲ್ಲಿ ಅವರನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಕಾಂಗ್ರೇಸ್ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ತಿಲಕ್‍ಗೌಡ, ಜಿಲ್ಲಾ ಯುವ ಕಾಂಗ್ರೇಸ್ ಪದಾಧಿಕಾರಿಗಳಾದ ಹೆಚ್.ಎನ್.ರತನ್, ಆರ್.ಲಾಕೇಶ್, ಭರತ್, ಗೌತಂ ಸಿದ್ದಾರ್ಥ, ಶರತ್ ಹಾಜರಿದ್ದರು.