ಚಿಕ್ಕಮಗಳೂರು : ಖಾಸಗಿ ವಾಹಿನಿಯ ಮೇಲೆ ದಾಳಿ ನಡೆಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಎಸ್‍ಪಿ ವತಿಯಿಂದ ರಾಜ್ಯಪಾಲರಿಗೆ ದೂರು…

128
firstsuddi

ಚಿಕ್ಕಮಗಳೂರು : ಮುಖ್ಯಮಂತ್ರಿ ಪುತ್ರನ ಹಗರಣಗಳನ್ನು ಬಯಲಿಗೆಳೆದ ಖಾಸಗಿ ವಾಹಿನಿಯ ಮೇಲೆ ದಾಳಿ ನಡೆಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ಬಹುಜನ ಸಮಾಜಪಕ್ಷ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಜಿಲ್ಲಾಧಿಕಾರಿ ಡಾ|| ಬಗಾಧಿ ಗೌತಮ್ ಅವರನ್ನು ಭೇಟಿ ಮಾಡಿದ ಸಮಿತಿಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸುವುದರ ಜೊತೆಗೆ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ನಡೆಸಿರುವ ಕೋಟ್ಯಾಂತರ ರೂಗಳ ಭ್ರಷ್ಟಾಚಾರವನ್ನು ಬಯಲಿಗೆಳೆದಿರುವ ಪವರ್ ಟಿ.ವಿ ಕಚೇರಿ ಮೇಲೆ ದಾಳಿ ನಡೆಸಿ ಉದ್ಯೋಗಿಗಳನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡಿದೆ ಎಂದು ಆರೋಪಿಸಿದರು.
ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳಿಗೆ ರಕ್ಷಣೆ ನೀಡಬೇಕಾದ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿರುವುದು ಪತ್ರಿಕಾ ಸ್ವಾಂತ್ರ್ಯದ ಹರಣ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಪದಾಧಿಕಾರಿಗಳು ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪವರ್ ಟಿ.ವಿ ಬಯಲಿಗೆಳೆದಿರುವ ಕೋಟ್ಯಾಂತರ ರೂ ಭ್ರಷ್ಟಾಚಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಹುಜನ ಸಮಾಜಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ. ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ಖಜಾಂಚಿ ವಾಹೀದ್, ತಾಲ್ಲೂಕು ಅಧ್ಯಕ್ಷ ಹರೀಶ್, ನಗರಾಧ್ಯಕ್ಷ ಹನುಮಂತರಾಯ, ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ, ಎ.ಪಿ.ಸುರೇಶ್, ಜೋಸೇಫ್ ಹಾಜರಿದ್ದರು.