ಚಿಕ್ಕಮಗಳೂರು : ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಆಚರಣೆ…

745
firstsuddi

ಚಿಕ್ಕಮಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿಯನ್ನು ಜಿಲ್ಲಾ ಯುವ ಕಾಂಗ್ರೇಸ್ ನಗರದ ಎಐಟಿ ವೃತ್ತದ ನಿರಾಶ್ರಿತರ ಕೇಂದ್ರದಲ್ಲಿ ಇಂದು ಅರ್ಥಪೂರ್ಣವಾಗಿ ಆಚರಿಸಿತು. ಪುಣ್ಯತಿಥಿ ಪ್ರಯುಕ್ತ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಜಿಲ್ಲಾ ಯುವ ಕಾಂಗ್ರೇಸ್ ಪದಾಧಿಕಾರಿಗಳು ಪೂಜೆ ಸಲ್ಲಿಸಿ ಪುಷ್ಪ ನಮನ ಮಾಡಿದರು, ಮಾಜಿ ಪ್ರಧಾನಿ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

ನಂತರ ನಿರಾಶ್ರಿತರ ಕೇಂದ್ರದ ನಿವಾಸಿಗಳಿಗೆ ಮಧ್ಯಾಹ್ನದ ಊಟ, ಸಹಾಯ ಧನ ವಿತರಿಸಲಾಯಿತು, ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ರಾಜೀವ್ ಗಾಂಧಿ ಅವರು ದೇಶದ ಅಭಿವೃದ್ದಿಯ ಹರಿಕಾರ ಎಂದರು. ರಾಜೀವ್ ಗಾಂಧಿ ಅವರ ಆಡಳಿತದಲ್ಲಿ ಐಟಿಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳು ಅಭಿವೃದ್ದಿ ಹೊಂದುವ ಮೂಲಕ ರಾಷ್ಟ್ರ ಪ್ರಗತಿಯತ್ತ ಸಾಗಲು ಸಾಧ್ಯವಾಯಿತು ಎಂದ ಅವರು ಯುವ ಜನತೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು, ಅವರ ಕನಸನ್ನು ನನಸು ಮಾಡುವತ್ತ ಹೆಜ್ಜೆ ಹಾಕಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಹರ್ಷವರ್ಧನ್, ನಿರ್ದೇಶಕರಾದ ಲಾಕೇಶ್, ಶ್ರೀಶಾಂತ್, ರೂಬಿನ್ ಮೋಸಸ್ ಹಾಜರಿದ್ದರು.