ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 30 ಮಂದಿಗೆ ಕೊರೊನಾ ಪಾಸಿಟಿವ್…

455

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ಜಿಲ್ಲೆಯಲ್ಲಿ 30 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 198ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿದ ಇಂದಿನ ಹೆಲ್ತ್ ಬುಲೆಟಿನ್‍ನಲ್ಲಿ ಚಿಕ್ಕಮಗಳೂರು ನಗರ-14, ಕಡೂರು-7, ಕೊಪ್ಪ-3, ತರೀಕೆರೆ-3, ಮೂಡಿಗೆರೆ-2 ಹಾಗೂ ಅಜ್ಜಂಪುರದಲ್ಲಿ 1 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.