ಚಿಕ್ಕಮಗಳೂರು : ಜ್ಞಾನರಶ್ಮಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.96 ಫಲಿತಾಂಶ…

82
firstsuddi

ಚಿಕ್ಕಮಗಳೂರು : ನಗರದ ಹಳೇ ಉಪ್ಪಳ್ಳಿಯ ಜ್ಞಾನರಶ್ಮಿ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.96 ಫಲಿತಾಂಶ ಲಭಿಸಿದೆ.

ಶಾಲೆಯ 65 ವಿದ್ಯಾರ್ಥಿಗಳು ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದು, 63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, 18 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 42 ವಿದ್ಯಾರ್ಥಿಗಳು ಪ್ರಥಮ ಹಾಗೂ ಮೂವರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿ ಐ.ವೈ.ಹೇಮಂತ್ ಕುಮಾರ್ 614 (ಶೇ.98.24) ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದರೆ ಎನ್.ಎಫ್.ಸಿದ್ದೀಕ್ 591 (ಶೇ.94.56) ಅಂಕ ಗಳಿಸಿ ದ್ವಿತೀಯ ಸ್ಥಾನವನ್ನು ಹಾಗೂ ಭೂಮಿಕಾ ಕುಮಾರಿ ಮಾಲಿ 586 (ಶೇ.93.76) ಅಂಕ ಗಳಿಸಿ ತೃತೀಯ ಸ್ಥಾನ ಗಳಿಸಿದ್ದಾರೆ.

ಕನ್ನಡ ವಿಷಯದಲ್ಲಿ ಇಬ್ಬರು ವಿದ್ಯಾರ್ಥಿಗಳು, ಹಿಂದಿ ವಿಷಯದಲ್ಲಿ ನಾಲ್ಕು ವಿದ್ಯಾರ್ಥಿಗಳು, ಗಣಿತದಲ್ಲಿ ಎರಡು ಹಾಗೂ ಸಮಾಜ ವಿಜ್ಞಾನದಲ್ಲಿ ನಾಲ್ಕು ವಿದ್ಯಾರ್ಥಿಗಳು ಶೇ.100 ಅಂಕ ಗಳಿಸಿದ್ದಾರೆ ಎಂದು ಶಾಲೆಯ ಕಾರ್ಯದರ್ಶಿ ಎನ್.ಪಿ.ಲಿಖಿತ್ ತಿಳಿಸಿದ್ದಾರೆ.