ಚಿಕ್ಕಮಗಳೂರು: ಡಿವೈಡರ್‌ಗೆ ಕಾರು ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು…

68
firstsuddi

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ.

ಮಂಗಳೂರು ನಗರದ ವಿಜಯಪುರ ಬಡಾವಣೆ ನಿವಾಸಿಗಳು ನಿರಂಜನ್(42), ಚೆನ್ನಮ್ಮ(67) ಮೃತರು. ಚಿಕ್ಕಮಗಳೂರು ಕಡೆಯಿಂದ ಕಡೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.