ಚಿಕ್ಕಮಗಳೂರು : ಡೆತ್ ನೋಟ್ ಬರೆದಿಟ್ಟು ಶ್ರೀಗಂಧ ಬೆಳೆಗಾರ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ನಾಪತ್ತೆಯಾದವರನ್ನು ವಿಶುಕುಮಾರ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಾಗಿ ರೈತರು ಬೆಳೆದಿರುವ ಶ್ರೀಗಂಧದ ಮರಗಳನ್ನು ಕಡಿಯಲಾಗಿದ್ದು, ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ 22 ಮಂದಿ ಸಂತ್ರಸ್ತ ರೈತರಿಗೆ ನೀಡಬೇಕಾಗಿದ್ದ ಪರಿಹಾರ ಹಣ ಇನ್ನೂ ನೀಡದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಇದರಿಂದ ಬೇಸತ್ತ ವಿಶುಕುಮಾರ್ ಅವರು ಮಾಡಿ ನಿಮಗೆಲ್ಲಾ ಮೋಸ ಮಾಡಿ ಹೋಗುತ್ತಿದ್ದೇನೆ ಎಂದು ಕುಟುಂಬಸ್ಥರಿಗೆ ವೀಡಿಯೋ ಮೂಲಕ ತಿಳಿಸಿದ್ದಾರೆ. ಅಲ್ಲದೇ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ.