ಚಿಕ್ಕಮಗಳೂರು : ದುಬೈನಿಂದ ಆಗಮಿಸಿದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ತರೀಕೆರೆ ತಾಲ್ಲೂಕಿನ 59 ವರ್ಷದ ಮಹಿಳೆ ಮಾರ್ಚ್ 13ರಂದು ದುಬೈನಿಂದ ಆಗಮಿಸಿದ್ದು, ಬಳಿಕ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ, ಕೊರೊನಾ ಸೋಂಕು ತಗುಲಿರುವುದಾಗಿ ಶಂಕಿಸಿ ಮಹಿಳೆಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯ ಐಸೊಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆಯ ರಕ್ತ, ಗಂಟಲು ದ್ರವವನ್ನು ಸಂಗ್ರಹಿಸಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.










