ಚಿಕ್ಕಮಗಳೂರು : ದೇಶದ ಪ್ರತಿಯೊಬ್ಬ ನಾಗರೀಕರೂ ಕಾನೂನನ್ನು ಗೌರವಿಸಬೇಕು : ಎ.ಎಸ್.ಸೋಮ.

101
firstsuddi

ಚಿಕ್ಕಮಗಳೂರು : ದೇಶದ ಪ್ರತಿಯೊಬ್ಬ ನಾಗರೀಕರೂ ಈ ನೆಲದ ಕಾನೂನನ್ನು ಗೌರವಿ ಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎ.ಎಸ್.ಸೋಮ ಅವರು ಹೇಳಿದರು.

ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ರಾಷ್ಟ್ರಪಿತ ಮಹಾತ್ಮಗಾಂಧಿಜೀ ಮತ್ತು ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರೀ ಅವರ ಜಯಂತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಪ್ರಜೆಯು ನೆಲದ ಕಾನೂನನ್ನು ಗೌರವಿಸಿ ಅದನ್ನು ಪಾಲನೆ ಮಾಡಿದರೆ ದೇಶದಲ್ಲಿ ಅಪರಾಧ ಪ್ರಕರಣಗಳು ನಡೆಯುವುದಿಲ್ಲ. ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದು ತಿಳಿಸಿದರು.

ಮಲೆನಾಡು ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಎಸ್.ಶಂಕರನಾರಾಯಣಭಟ್ ಮಾತನಾಡಿ ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿ ಅವರ ತತ್ವ, ಸಿದ್ದಾಂತ ಮತ್ತು ಸಂದೇಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸಲಹೆ ಮಾಡಿದರು.

ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಸಾಮೂಹಿಕ ಪುಷ್ಪನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಂದ ಭಗವದ್ಗಿತೆ, ಬೈಬಲ್ ಮತ್ತು ಕುರಾನ್ ಪಠಣ ನಡೆದವು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಥಾಮಸ್ ಉಪನ್ಯಾಸ ನೀಡಿದರು.

ಮಲೆನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ರಾಧಾಸುಂದ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯ್‍ಕುಮಾರ್, ಸದಸ್ಯ ಕನಕರಾಜ್, ವ್ಯವಸ್ಥಾಪಕಿ ಶ್ರೀಲಕ್ಷ್ಮೀ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎಂ.ಲೋಕೇಶ್, ಪಿಯು ಕಾಲೇಜಿನ ಪ್ರಾಚಾರ್ಯೆ ಎಂ.ಬಿ.ಜಯಶ್ರೀ, ವಾಣಿಜ್ಯ ವೇದಿಕೆ ಮುಖ್ಯಸ್ಥ ಮಂಜುನಾಥಭಟ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಸ್.ಶಾರದಾ, ಶಿಕ್ಷಕಿ ಎನ್.ರೂಪ ಉಪಸ್ಥಿತರಿದ್ದರು.