ಚಿಕ್ಕಮಗಳೂರು: ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ ಚಿಕ್ಕಮಗಳೂರು ಐಎಂಎ ಶಾಖೆ ಬೆಂಬಲ…

288

ಚಿಕ್ಕಮಗಳೂರು: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆ ಓಪಿಡಿ ಸೇವೆ ಸ್ಥಗಿತಗೊಳಿಸಿ ವೈದ್ಯರು ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ಪ್ರತಿಮೆ ಬಳಿ ಐವತ್ತಕ್ಕೂ ಹೆಚ್ಚು ವೈದ್ಯರು ಕೈಗೆ ಕಪ್ಪು ಬಟ್ಟಿ ಧರಿಸಿ ಗಾಂಧಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಆಸ್ಪತ್ರೆಯ ವೈದ್ಯರು ಎಂದಿನಂತೆ ಕೆಲಸ ನಿರ್ವಹಿಸಿದರು.