ಚಿಕ್ಕಮಗಳೂರು: ನಗರದ ಬೇಲೂರು ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.83 ಫಲಿತಾಂಶ ಲಭಿಸಿದೆ.
ವಾಣಿಜ್ಯ ವಿಭಾಗದಲ್ಲಿ ಬಿ.ಆರ್.ಮೋನಿಕಾ 573, ಕಲಾ ವಿಭಾಗದಲ್ಲಿ ಡಿ.ಸಹನ 581, ವಿಜ್ಞಾನ ವಿಭಾಗದಲ್ಲಿ ಎನ್.ಪ್ರಿಯ 557 ಅಂಕ ಗಳಿಸಿದ್ದಾರೆ ಎಂದು ಪ್ರಾಚಾರ್ಯ ಜಿ.ಬಿ.ವಿರೂಪಾಕ್ಷ ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾಗಿದ್ದ 631 ವಿದ್ಯಾರ್ಥಿಗಳ ಪೈಕಿ 522 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 16 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 125 ಪ್ರಥಮ,40 ದ್ವಿತೀಯ, 10 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 19 ಅತ್ಯುನ್ನತ, 72 ಪ್ರಥಮ, 28 ದ್ವಿತೀಯ, 15 ವಿದ್ಯಾರ್ಥಿಗಳು ತೃತೀಯ ಸ್ಥಾನ, ಕಲಾವಿಭಾಗದಲ್ಲಿ 13 ಅತ್ಯುನ್ನತ, 86 ಪ್ರಥಮ, 45 ದ್ವಿತೀಯ, 53 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.










