ಚಿಕ್ಕಮಗಳೂರು:- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಕುವೆಂಪು ವಿದ್ಯಾನಿಕೇತನದ ರೇಡಿಯಂಟ್ ಕಾಲೇಜಿಗೆ ಶೇ 100 ಫಲಿತಾಂಶ ಲಭಿಸಿದೆ.
ಪರೀಕ್ಷೆ ಎದುರಿಸಿದ ಎಲ್ಲಾ ವಿದ್ಯಾರ್ಥಿಗಳೂ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ಶೇ 96 ರಷ್ಟು ಅಂಕ ಗಳಿಸುವ ಮೂಲಕ ವಿದ್ಯಾರ್ಥಿನಿ ಸಿಂಚನ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ. ಸಿ. ಶಂಕರ್ ತಿಳಿಸಿದ್ದಾರೆ.