ಚಿಕ್ಕಮಗಳೂರು: ನನ್ನ ಡ್ಯೂಟಿ ಮುಗೀತು, ಬೇರೆಯವರು ಪೆಟ್ರೋಲ್ ಹಾಕುತ್ತಾರೆ ಎಂದಿದ್ದಕ್ಕೆ ವ್ಯಕ್ತಿಯೊಬ್ಬ ಬಂಕ್ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ನಯಾರ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.
ಬಂಕ್ ಸಿಬ್ಬಂದಿ ಡ್ಯೂಟಿ ಮುಗಿಸಿ ಹೊರಡುವ ವೇಳೆ ಕಾರಿನಲ್ಲಿ ಬಂದ ವ್ಯಕ್ತಿ ಪೆಟ್ರೋಲ್ ಹಾಕುವಂತೆ ಹೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಡ್ಯೂಟಿ ಮುಗಿದಿದೆ. ಇನ್ನೊಬ್ಬರು ಪೆಟ್ರೋಲ್ ಹಾಕುತ್ತಾರೆ ಎಂದಿದ್ದಾರೆ. ಈ ವಿಚಾರಕ್ಕೆ ಕಾರಿನಲ್ಲಿ ಬಂದಿದ್ದ ಮಧು ಹುರುಡಿ ಎಂಬಾತ ಸಿಬ್ಬಂದಿಗಳ ಜೊತೆ ಕಿರಿಕ್ ತೆಗೆದು ಕಾರಿನಲ್ಲಿದ್ದ ಕ್ರಿಕೆಟ್ ಬ್ಯಾಟ್‌ನಿಂದ ಬಂಕ್ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡಿದ ದೃಶ್ಯವನ್ನ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಕಾರು ಸವಾರ ಮಧು ಹುರುಡಿ ವಿರುದ್ಧ ಪ್ರಕರಣ ದಾಖಲಾಗಿದೆ.










