ಚಿಕ್ಕಮಗಳೂರು : ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹೆಚ್.ಪಿ.ಅಶ್ವತ್‍ಕುಮಾರ್ ಅರಸ್ ಅವಿರೋಧ ಆಯ್ಕೆ…

260
firstsuddi

ಚಿಕ್ಕಮಗಳೂರು : ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಎಲ್.ಬಿ.ಎಸ್ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹೆಚ್.ಪಿ.ಅಶ್ವತ್‍ಕುಮಾರ್ ಅರಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಎಂ.ಡಿ.ಸುದರ್ಶನ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಇತ್ತೀಚೆಗೆ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.