ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ…

87
firstsuddi

ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.

ಸುರಕ್ಷಾ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಶೃಂಗೇರಿ ಪದವಿ ಕಾಲೇಜಿನಲ್ಲಿ ಬಿಕಾಂ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ, ಪಟ್ಟಣದ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿದ್ದುಕೊಂಡು ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದಳು.

ಗೌರಿ-ಗಣೇಶ ಹಬ್ಬಕ್ಕೆಂದು ಊರಿಗೆ ಹೋದಾಗ ಆಕೆಯ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ, ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.