ಚಿಕ್ಕಮಗಳೂರು : ಮಹಾಮಳೆಯಿಂದಾಗಿ ಸಂಕಷ್ಟಕ್ಕೀಡಾಗಿರುವ ಸಂತ್ರಸ್ಥರಿಗೆ ನೆರವು ನೀಡುವ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್‍ನಿಂದ ಪ್ರಕೃತಿ ವಿಕೋಪ ನಿಧಿಗೆ ಹತ್ತು ಲಕ್ಷ ರೂ ದೇಣಿಗೆ ನೀಡಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಎಸ್.ಎಲ್.ಧರ್ಮೇಗೌಡ ಹೇಳಿದರು.
ನಗರದ ಡಿಸಿಸಿ ಬ್ಯಾಂಕಿನ ಆವರಣದಲ್ಲಿ ಗುರುವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಪ್ರಕೃತಿ ವಿಕೋಪ ನಿಧಿಗೆ ಬ್ಯಾಂಕಿನ ಅಧಿಕಾರಿಗಳು ನೌಕರರು ಮತ್ತು ಸಿಬ್ಬಂಧಿಗಳ ಎರಡು ದಿನದ ಸಂಬಳವನ್ನು ನೀಡಲಾಗುವುದು ಎಂದರು.
ಬ್ಯಾಂಕಿನ ಅಧೀನದಲ್ಲಿರುವ ಸಹಕಾರ ಸಂಘಗಳು ಮತ್ತು ಸಂಸ್ಥೆಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ದೇಣಿಗೆಯನ್ನು ನೀಡಲಾಗುವುದು ಎಂದು ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು, ಬ್ಯಾಂಕಿನ ನಿರ್ದೇಶಕ ಟಿ.ಮಂಜುನಾಥ್ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು ಹಾಜರಿದ್ದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಪ್ರವಾಹ ಸಂತ್ರಸ್ತರಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ಪ್ರಕೃತಿ ವಿಕೋಪ ನಿಧಿಗೆ 10 ಲಕ್ಷ...










