ಚಿಕ್ಕಮಗಳೂರು : ಬಿಕಾಂ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ-ಆರೋಪ ಸಾಬೀತು…

481
firstsuddi

ಚಿಕ್ಕಮಗಳೂರು : ಬಿಕಾಂ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಜೆಎಂಎಫ್‍ಸಿ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಇಬ್ಬರು ಆರೋಪಿಗಳು ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಇನ್ನು ನಿಗಧಿಪಡಿಸಿಲ್ಲ. ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆ ಗ್ರಾಮದಲ್ಲಿ 2016ರ ಫೆಬ್ರವರಿಯಲ್ಲಿ ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಿಕಾಂ ವಿದ್ಯಾರ್ಥಿನಿಯನ್ನು ಆರೋಪಿಗಳಾದ ಪ್ರದೀಪ್ ಹಾಗೂ ಸಂತೋಷ್ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಲಯ ಸೆಕ್ಷನ್ 376 (ಡಿ), 302, 201 376 (2) (ಎಂ) ಸೆಕ್ಷನ್ ಅಡಿ ಇವರ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದೆ.