ಚಿಕ್ಕಮಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಒಂದು ತಿಂಗಳಿನಿಂದ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಆದರೆ ಜನಸಾಮಾನ್ಯರು ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಲೇ ಇದ್ದು, ಇದನ್ನು ತಡೆಯಲು ಪೊಲೀಸರು ಲಾಠಿ ಏಟು, ವಾಹನ ಸೀಜ್ ಮಾಡುವುದು, ಬಸ್ಕಿ ಹೊಡೆಸುವುದು ಹೀಗೆ ನಾನಾ ರೀತಿಯ ಶಿಕ್ಷೆಗಳನ್ನು ನೀಡಿದ್ದಾರೆ. ಆದರೆ ಇದರಿಂದ ಬುದ್ಧಿ ಕಲಿಯದ ಜನಸಾಮಾನ್ಯರಿಗೆ ಜಿಲ್ಲೆಯ ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರು ಪೊಲೀಸರು ವಿಭಿನ್ನ ರೀತಿಯಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಹೌದು, ಬಾಳೆಹೊನ್ನೂರು ಪೊಲೀಸರು ಬೀದಿ ನಾಟಕ ಪ್ರದರ್ಶನ ಮಾಡುವ ಮೂಲಕ ಮಹಾಮಾರಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. “ಮಾಡಲು ಕೊರೊನಾ ಸಂಹಾರ, ಪಾಲಿಸಿ ಸಾಮಾಜಿಕ ಅಂತರ” ಎಂಬ ಶೀರ್ಷಿಕೆಯನ್ನು ಇಟ್ಟುಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಾಟಕವನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದು, ಸ್ವತಃ ಪೊಲೀಸರೇ ಯಕ್ಷಗಾನದ ರೀತಿಯಲ್ಲಿ ನಾಟಕವನ್ನು ಪ್ರದರ್ಶಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜಾಗೃತಿ ಮೂಡಿಸಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಬೀದಿ ನಾಟಕ ಪ್ರದರ್ಶಿಸಿ ವಿಭಿನ್ನವಾಗಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಬಾಳೆಹೊನ್ನೂರು ಪೊಲೀಸರು…










