ಚಿಕ್ಕಮಗಳೂರು : ಮೆಣಸೂರು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ವಿರುದ್ದ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪಂಚಾಯಿತಿಯನ್ನು ಒತ್ತಾಯಿಸಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತಿ ಅವರನ್ನು ಗುರುವಾರ ಭೇಟಿ ಮಾಡಿದ ಸಮಿತಿಯ ಮುಖಂಡರು ಈ ಸಂಬಂಧ ಮನವಿ ಸಲ್ಲಿಸಿದರು.
ಮೆಣಸೂರು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಲ್.ಜೆ.ಮಹೇಶ್ ಅವರು 2010 ರಿಂದಲೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಕಳೆದ 3 ವರ್ಷಗಳ ಹಿಂದೆ ಅವರನ್ನು ಕೊರಟಿಕೆರೆಗೆ ವರ್ಗಾವಣೆ ಮಾಡಿದ್ದು, ಮೆಣಸೂರು ಗ್ರಾ.ಪಂ. ಸದಸ್ಯರು ಮತ್ತು ಸಾರ್ವಜನಿಕರು ಒತ್ತಡ ತಂದು ಅವರನ್ನು ಮರುವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದರು.
ಆದರೆ ಇತ್ತೀಚೆಗೆ ಗ್ರಾ.ಪಂ. ಸದಸ್ಯರು ಕೆಲವು ಅನುಮೋದನೆಗಳನ್ನು ಕಾನೂನು ಬಾಹಿರವಾಗಿ ಪಡೆಯಲು ವಿಫಲರಾಗಿದ್ದು, ಆ ಹಿನ್ನೆಲೆಯಲ್ಲಿ ಪಿಡಿಓ ಅವರ ಮೇಲೆ ಸುಳ್ಳು ಆಪಾದನೆಗಳನ್ನು ಮಾಡುತ್ತಿದ್ದಾರೆ , ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುವಂತೆ ಒತ್ತಡ ಹೇರಿ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪಿಡಿಓ ಅವರ ಮೇಲಿನ ವೈಯಕ್ತಿಕ ದ್ವೇಷದಿಂದ ಅವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಕೆಲವರು ಅವರ ವಿರುದ್ದ ಷಡ್ಯಂತರ ಮಾಡುತ್ತಿದ್ದಾರೆ ಎಂದು ದೂರಿದ ಮುಖಂಡರು ಈ ಹಿನ್ನಲೆಯಲ್ಲಿ ಆ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಸಿ.ವಸಂತಕುಮಾರ್, ತಾಲ್ಲೂಕು ಸಂಚಾಲಕ ಚಂದ್ರಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚೌಡಪ್ಪ, ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್.ಮಲ್ಲಪ್ಪ, ಪದಾಧಿಕಾರಿಗಳಾದ ಹೆಚ್.ಇ.ದೊಡ್ಡಯ್ಯ, ಮೃತ್ಯುಂಜಯ, ವಿ.ಧರ್ಮೇಶ್, ರಾಜೇಶ್, ಬಿ.ಅರ್.ಸಿದ್ದಪ್ಪ, ಸೋಮಶೇಖರ್ ಹಾಜರಿದ್ದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಮೆಣಸೂರು ಗ್ರಾ.ಪಂ ಅಭಿವೃದ್ದಿ ಅಧಿಕಾರಿ ವಿರುದ್ದ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಜಿಲ್ಲಾಡಳಿತಕ್ಕೆ...










