ಚಿಕ್ಕಮಗಳೂರು : ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ…

301
firstsuddi

ಚಿಕ್ಕಮಗಳೂರು : ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರು ಸಮೀಪದ ಎಲೆಕಲ್ಲು ಗ್ರಾಮದ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗದ ಚಕ್ರ ಕಳಚಿ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಲಾರಿ ಡಿಕ್ಕಿಯಾದ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.