ಚಿಕ್ಕಮಗಳೂರು : ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ಸಂಭ್ರಮದಿಂದ ಆಚರಿಸಿದ ಶ್ರೀ ರಾಮನವಮಿ..!

152
firstsuddi

ಚಿಕ್ಕಮಗಳೂರು : ನಗರದ ನೇಕಾರ ಬೀದಿಯ ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನವಾದ ಇಂದು ಶ್ರೀ ರಾಮನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ರಾಮನವಮಿ ಪ್ರಯುಕ್ತ ಪ್ರಧಾನ ಅರ್ಚಕ ಕೆ.ವಿ.ಸತ್ಯಪ್ರಸನ್ನ ಅವರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ರಾಮನಿಗೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ಅಲಂಕಾರ ಜರುಗಿತು.

ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ರಾಮನವಮಿ ಪ್ರಯುಕ್ತ ಸಾರ್ವಜನಿಕರಿಗೆ ಕೋಸಂಬರಿ, ಪಾನಕ ವಿತರಿಸಲಾಯಿತು. ಸಂಜೆ ಉಯ್ಯಾಲೋತ್ಸವ ನೆರವೇರಿತು. ಶ್ರೀ ರಾಮನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.