ಚಿಕ್ಕಮಗಳೂರು : ಸಿ.ಟಿ ರವಿ ಆಸ್ಪತ್ರೆಗೆ ದಾಖಲು…

65
firstsuddi

ಚಿಕ್ಕಮಗಳೂರು: ಶಾಸಕರೂ ಆಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಿನ್ನೆ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿ.ಟಿ ರವಿ ಅವರಿಗೆ ಕಿಡ್ನಿ ಸ್ಟೋನ್‌ನಿಂದ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದರು. ಕಳೆದ 15 ದಿನಗಳಿಂದಲೂ ಆಸ್ಪತ್ರೆ ಸೇರಿದ್ದ ಅವರು, ಲಿಂಗಾಯತ ಸಮಾವೇಶಕ್ಕೂ ಗೈರಾಗಿ, ವೀಡಿಯೋ ಮೂಲಕ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಚಿಕಿತ್ಸೆಗಾಗಿ ಮತ್ತೆ ಆಸ್ಪತ್ರೆಗೆ ಸೇರಿದ್ದಾರೆ.