ಚಿಕ್ಕಮಗಳೂರು : ಸುವರ್ಣ ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ…

234
firstsuddi

ಚಿಕ್ಕಮಗಳೂರು : ನಗರದ ಸುವರ್ಣ ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇಂದು ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿತು. ಪತ್ರಕರ್ತ ಜಿ.ವಿ.ಚೂಡಾನಾಥ ಅಯ್ಯರ್ ನಾಡ ಧ್ವಜಾರೋಹಣ ನೆರವೇರಿಸಿದರು. ರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್, ತಾಲ್ಲೂಕು ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹಾಜರಿದ್ದರು.