ಚಿಕ್ಕಮಗಳೂರು: ಹೃದಯಾಘಾತದಿಂದ 7 ತರಗತಿ ವಿದ್ಯಾರ್ಥಿನಿ ಸಾವು…

54
firstsuddi

ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೋಗುತಿದ್ದಾಗ ದಾರದಹಳ್ಳಿ ಸರ್ಕಲ್ ಬಳಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸೃಷ್ಟಿ ಸಾವನ್ನಪ್ಪಿದ್ದಾಳೆ.

ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದು, ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ.