ಚಿಕ್ಕಮಗಳೂರು ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರು ಮೂಲದ ಟೆಕ್ಕಿ ಸಾವು.

61

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಅಮೀತ್ ಕುಮಾರ್ ಎಂಬುವವರು ಕೆಮ್ಮಣ್ಣುಗುಂಡಿ ಬಳಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದೀಪಾವಳಿ ಹಬ್ಬದ ರಜೆ ಇದ್ದ ಕಾರಣ ಇಬ್ಬರು ಗೆಳೆಯರು ಚಿಕ್ಕಮಗಳೂರಿಗೆ ಪ್ರವಾಸ ಕೈಗೊಂಡಿದ್ದರು.  ಈ ಇಬ್ಬರು ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. 120 ಅಡಿ ಇಳಿಜಾರಿನಲ್ಲಿ ನೀರು ಹರಿಯುವ ಹೆಬ್ಬೆ ಜಲಪಾತ ಸೇರಿದಂತೆ ಜಿಲ್ಲೆಯ ಹಲವು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿದ್ದರು. ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ, ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯರು ಇನ್ನೊರ್ವ ಟೆಕ್ಕಿಯಾದ ಸಲಾಂ ಖಾನ್ ನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.