ಚಿಕ್ಕಮಗಳೂರು : 15 ಮೆಟ್ರಿಕ್ ಟನ್‍ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರ ನಿರ್ಬಂಧಿಸಿ ಹೊರಡಿಸಿರುವ ಆದೇಶ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ|| ಬಗಾಧಿ ಗೌತಮ್ ಆದೇಶ.

253
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿ 15 ಮೆಟ್ರಿಕ್ ಟನ್‍ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ|| ಬಗಾಧಿ ಗೌತಮ್ ಅವರು ಪೋಲೀಸ್, ಲೋಕೋಪಯೋಗಿ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆಗೆ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ 15 ಮೆಟ್ರಿಕ್ ಟನ್‍ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು 21-12-2006 ರಲ್ಲಿ ಜಿಲ್ಲಾಧಿಕಾರಿಗಳು ನಿಷೇಧಿಸಿ ಆದೇಶ ಹೊರಡಿಸಿದ್ದರು.
15 ಮೆಟ್ರಿಕ್ ಟನ್‍ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ನಿರ್ಭಂದಿಸಲು ಆದೇಶಿಸುವಂತೆ ಕೋರಿ ಕರ್ನಾಟಕ ಮಾಹಿತಿ ಹಕ್ಕು ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ ಕಾರ್ಯಕರ್ತರ ವೇದಿಕೆಯ ರಾಜ್ಯ ನಿರ್ದೇಶಕ ಸೋಮಾನಾಯಕ್ ಅವರು 30-06-2014 ರಂದು ಹೈಕೋರ್ಟ್‍ನ ಮೆಟ್ಟಿಲೇರಿದ್ದರು.
ರಾಜ್ಯ ಉಚ್ಚನ್ಯಾಯಾಲಯ ಸಹ ಜಿಲ್ಲೆಯಲ್ಲಿ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಸೂಚಿಸಿತ್ತು.
ನಂತರ ಸೋಮಾನಾಯಕ್ ಅವರು ಅಧಿಕ ಭಾರ ಹೊತ್ತು ಸಾಗುವ ವಾಹನಗಳಿಂದಾಗಿ ಜಿಲ್ಲೆಯ ರಸ್ತೆಗಳು ಹಾಳಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಮನವಿ ಸಲ್ಲಿಸುವುದರ ಜೊತೆಗೆ ಆದೇಶ ಪಾಲನೆ ಮಾಡದಿದ್ದಲ್ಲಿ ನ್ಯಾಯಾಂಗ ನಿಂದನೆಯಾಗುವ ಎಚ್ಚರಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ನಿರ್ಬಂಧದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರು ಪ್ರಾದೇಶಿಕ ಸಾರಿಗೆ ಅಧಿಕಾರಿ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ನಿರ್ಬಂಧದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದ್ದಾರೆ.