ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ : ಬೊಮ್ಮಾಯಿ.

63
firstsuddi

ಬೆಂಗಳೂರು : ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಲಾ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಂತೆ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ನೀಡಲಾಗುವುದು. ಕಾಡಿನಲ್ಲಿದ್ದ ಚಿರತೆಗಳು ಈಗ ನಾಡಿನತ್ತ ಬರುತ್ತಿದ್ದು ಬೆಂಗಳೂರಿನ ಸುತ್ತಮುತ್ತ ಓಡಾಡುತ್ತಿರುವುದು ಜನತೆಯನ್ನು ಭಯಭೀತಗೊಳಿಸಿದೆ. ಚಿರತೆಯನ್ನು ಜೀವಂತವಾಗಿ ಸೆರೆಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರು ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಕಂಡುಬಂದಿರುವ ಚಿರತೆಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.