ಚುನಾವಣೆ ದಿನದಂದೇ ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ…

193
firstsuddi

ಧಾರವಾಡ : ಇಂದು ಹಲವೆಡೆ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯುತ್ತಿದ್ದು, ಈ ನಡುವೆ ಚುನಾವಣೆಯ ದಿನದಂದೇ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ದಾಮೋದರ್ ಯಲಿಗಾರ್(33) ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ. ದಾಮೋದರ್ ಯಲಿಗಾರ್ ಅವರು ಗರಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ 2ರಲ್ಲಿ ಸ್ಪರ್ಧೆ ಮಾಡಿದ್ದರು. ಆದರೆ ಚುನಾವಣೆಯಲ್ಲಿ ಸೋಲುತ್ತೇನೆ ಎಂಬ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಗರಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.