ಸುಕ್ಮಾ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ನಡೆದ ಎನ್ ಕೌಂಟರ್ ನಲ್ಲಿ 10 ಮಂದಿ ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಇಂದು ಬೆಳಗಿನ ಜಾವ ಭೇಜ್ಜಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಭಾಗದಲ್ಲಿ ಭದ್ರತಾ ಸಿಬ್ಬಂದಿ ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ಆರಂಭವಾಯಿತು. ಗುಂಡಿನ ಚಕಮಕಿ ಇನ್ನೂ ಮುಂದುವರಿಯುತ್ತಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ, ಎನ್ಕೌಂಟರ್ನಲ್ಲಿ 10 ಮಂದಿ ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.










