ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದುರಾದೃಷ್ಟಕರ : ಸಿ.ಟಿ ರವಿ

58
firstsuddi

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದುರಾದೃಷ್ಟಕರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಸಿ.ಟಿ. ರವಿ, ಶೆಟ್ಟರ್ ಗೆ ಬಿಜೆಪಿ ಎಲ್ಲಾ ಸ್ಥಾನಮಾನ ನೀಡಿತ್ತು. ಆದರೂ ಅವರು ಕಾಂಗ್ರೆಸ್ ಸೇರಿದ್ದು ದುರಾದೃಷ್ಟಕರ ಎಂದರು. ಜಗದೀಶ್ ಶೆಟ್ಟರ್ ಪಕ್ಷ ತೊರೆದು ಯಾವ ಮೆಸೇಜ್ ನೀಡಿದ್ರು. ಸೈದ್ಧಾಂತಿಕವಾಗಿ ಬಿಜೆಪಿ ಜೊತೆ ಶೆಟ್ಟರ್ ಇರ್ಲಿಲ್ವಾ? ವೈಯಕ್ತಿಕ ಲಾಭ ನಷ್ಟವನ್ನು ಹಾಕಿ ನನಗೆ ಲಾಭ ಆದ್ರೆ ಮಾತ್ರ ಬಿಜೆಪಿ. ಇನ್ನೊಬ್ಬರಿಗೆ ಆದ್ರೆ ಬಿಜೆಪಿ ಅಲ್ಲ ಎಂಬ ಮನಸ್ಥಿತಿ ಆಶ್ಚರ್ಯ ತರಿಸಿದೆ. ಜಗದೀಶ್ ಶೆಟ್ಟರ್ ಅವರಿಂದ ಇಂತಹದನ್ನ ನಿರೀಕ್ಷೆ ಮಾಡಿರಲಿಲ್ಲ. ವೈಯಕ್ತಿಕವಾಗಿ ಸಮಸ್ಯೆ ಆದ್ರೆ ಸಮಾಧಾನವಾಗಿ ಬಗೆಹರಿಸುವವರು ಈ ನಿರ್ಣಯ ತೆಗೆದುಕೊಂಡಿದ್ದು ದುರಾದೃಷ್ಟಕರ ಎಂದರು.

ಲಕ್ಷ್ಮಣ್ ಸವದಿ ಚುನಾವಣೆಯಲ್ಲಿ ಸೋತರೂ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಮೂಲಕ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಮುಂದೆ ಇನ್ನಷ್ಟು ಉತ್ತಮ ಅವಕಾಶ ಸಿಗುತಿತ್ತು. ಆದರೆ, ಅವರು ಪಕ್ಷ ಬಿಟ್ಟು ದ್ರೋಹ ಮಾಡಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದರು.

ಬಿಜೆಪಿ ಪಕ್ಷ ಕಷ್ಟಗಳನ್ನು ದಾಟಿ ಬಂದಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಬೆಳವಣಿಗೆಯ ಇತಿಹಾಸದಲ್ಲಿ ಇದ್ದ ಸ್ಥಾನ ಶೆಟ್ಟರ್ ಕಳೆದುಕೊಂಡಿದ್ದಾರೆ. ಒಂದು ಪಕ್ಷ ನಷ್ಟವನ್ನು ರಿಕವರಿ ಮಾಡಿಕೊಳ್ಳುತ್ತೆ. ಆದ್ರೆ ವ್ಯಕ್ತಿ ನಷ್ಟವನ್ನು ರಿಕವರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಜನಸಂಘದಿಂದ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿದ ಕುಟುಂಬ ಎಂಬ ಹೆಗ್ಗಳಿಕೆಯಿಂದ ದೂರ ಆಗಿದ್ದಾರೆ. ಬಿಜೆಪಿ ಕಟ್ಟಿ ಬೆಳಿಸಿದ ನಾಯಕರ ಸಾಲಿಗೆ ಸೇರಬಹುದಾದಂತ ಅವಕಾಶವನ್ನು ಕಳೆದುಕೊಂಡಿದ್ದಾರೆ. ಇದು ತಾತ್ಕಾಲಿಕ ಹಿನ್ನಡೆಯಾದರೂ ಪಕ್ಷ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಹೇಳಿದರು.