ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ: ಅರವಿಂದ್ ಕೇಜ್ರಿವಾಲ್.

25

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾ ರೂಢ ಎಎಪಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದ್ದು, ಅದರ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ. ಈ ಕುರಿತು ಇದೇ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷದ ಮುಖ್ಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದು, ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ. ದೆಹಲಿ ಚುನಾವಣೆಯಲ್ಲಿ ಸೋತ ನಂತರ ಮಾತನಾಡಿದ ಅವರು, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದರ ಜೊತೆಗೆ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.