ಜನವರಿ 31ರವರೆಗೆ 144 ಸೆಕ್ಷನ್ ವಿಸ್ತರಿಸಿ ಕಮಲ್ ಪಂತ್ ಆದೇಶ…

64
firstsuddi

ಬೆಂಗಳೂರು : ನಗರದಲ್ಲಿ ಜಾರಿಯಲ್ಲಿರುವ 144 ಸೆಕ್ಷನ್ ಜನವರಿ 31ರವರೆಗೆ ವಿಸ್ತರಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ಪ್ರತಿಭಟನೆ, ರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ನಿಯಮ ಉಲ್ಲಂಘನೆ ಕಂಡು ಬಂದರೆ ಅಂತವರ ವಿರುದ್ಧ ಐಪಿಸಿ ಸೆಕ್ಷನ್ 188, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಜನವರಿ 19ರವರೆಗೆ ಜಾರಿ ಮಾಡಿ ಆದೇಶಿಸಲಾಗಿದ್ದ ನೈಟ್ ಕಫ್ರ್ಯೂ, ಹಾಗೂ ವೀಕೆಂಡ್ ಕಫ್ರ್ಯೂ ಸೇರಿದಂತೆ ಕಠಿಣ ಮಾರ್ಗಸೂಚಿಯನ್ನು ತಿಂಗಳಾಂತ್ಯದವರೆಗೂ ವಿಸ್ತರಿಸಲಾಗಿದೆ.