ಜನವರಿ 31ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭ…

66
firstsuddi

ನವದೆಹಲಿ : ಜನವರಿ 31ರಿಂದ ಸಂಸತ್ತಿನ ಬಜೆಟ್ ಅಧಿವೇಶನವು ಪ್ರಾರಂಭವಾಗಲಿದೆ. ಜನವರಿ 31ರಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡುವುದರೊಂದಿಗೆ ಆರಂಭವಾಗಿ ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದೆ.

ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 11ರಂದು ಮುಕ್ತಾಯವಾಗಿ ಒಂದು ತಿಂಗಳ ಅವಧಿಯ ಬಿಡುವಿನ ಬಳಿಕ ಮಾರ್ಚ್ 14 ರಿಂದ ಏಪ್ರಿಲ್ 8ರವರೆಗೆ ಎರಡನೇ ಭಾಗದ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಕೇಂದ್ರದ 2022-23ರ ಹಣಕಾಸು ವರ್ಷದ ಬಜೆಟ್ ಮಂಡನೆಯಾಗಲಿದೆ.