ಜಮೀರ್ ಅಹ್ಮದ್ ಮುಂದಿನ ಸಿಎಂ : ವಿರಕ್ತಮಠದ ಪಂಚಾಕ್ಷರಿ ಸ್ವಾಮೀಜಿ ಭವಿಷ್ಯ…

57
firstsuddi

ಬೆಳಗಾವಿ : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂದು ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದ ಕುಮಾರೇಶ್ವರ ವಿರಕ್ತಮಠದ ಪಂಚಾಕ್ಷರಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದೆ. ಜಮೀರ್ ಅಹ್ಮದ್ ಬೆಂಗಳೂರಿನಿಂದ ಇಲ್ಲಿಯವರೆಗೂ ಬಂದಿದ್ದಾರೆ. ನಮ್ಮ ಭಾಗದ ಜನಪ್ರಿಯ ಶಾಸಕ ಮಹಾಂತೇಶ್ ಕೌಜಲಗಿ ಮುಂದೆ ಶಾಸಕರಾದರೇ, ನಮ್ಮ ರಾಜ್ಯದ ಜನಪ್ರಿಯ ಶಾಸಕರು, ಮಾಜಿ ಮಂತ್ರಿಗಳು ಮುಂದೆ ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ.

ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದು ಆಶೀರ್ವಚನ ನೀಡಿದರು.