ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಇಬ್ಬರು ಯೋಧರು ಹುತಾತ್ಮ.

26

ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಕಿಶ್ತವಾರ್‍ಗೆ ಸಂಪರ್ಕಿಸುವ ನೈದಘಮ್ ಪ್ರದೇಶದಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಕಿರಿಯ ಸೇನಾಧಿಕಾರಿ ಸೇರಿ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ಮುಂದುವರೆದಿದೆ. ಅನಂತ್‍ನಾಗ್ ಜಿಲ್ಲೆಯ ಕಿಶ್ತವಾರ್‍ಗೆ ಸಂಪರ್ಕಿಸುವ ನೈದಘಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ತತಾ ಪಡೆ ಮತ್ತು ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸೇನಾಧಿಕಾರಿ ನೈಬ್ ಸುಬೇದಾರ್ ವಿಪುನ್ ಕುಮಾರ್ ಮತ್ತು ಯೋಧ ಅರವಿಂದ್ ಸಿಂಗ್ ಅವರು ವೀರ ಮರಣವನ್ನಪ್ಪಿದ್ದಾರೆ. ಮೃತರಲ್ಲಿ ಒರ್ವ ಗ್ರೇನೆಡ್ ಸ್ಪೋಟದಿಂದ ಮತ್ತೋರ್ವ ತಲೆಗೆ ಗುಂಡು ತಗಲಿದ್ದರಿಂದ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಬ್ಬರು ಯೋಧರ ಸಾವನ್ನು ಸೇನೆ ಕೂಡ ಧೃಡಪಡಿಸಿದೆ ವೀರ ಮರಣ ಹೊಂದಿದ ಯೋಧರ ತ್ಯಾಗಕ್ಕೆ ಭದ್ರತಾ ಪಡೆ ವಂದನೆ ಸಲ್ಲಿಸುತ್ತದೆ. ಅವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ ಎಂದು ಸೇನೆ ಹೇಳಿದೆ.
ಇನ್ನು ಯೋಧರ ಸಾವಿಗೆ ಜಮ್ಮು ಕಾಶ್ಮೀರದ ಕಾಂಗ್ರೇಸ್ ಘಟಕ ತೀವ್ರ ಸಂತಾಪ ಸೂಚಿಸಿದೆ. ಜೊತೆಗೆ ಗಾಯಗೊಂಡ ಯೋಧರು ಶೀಘ್ರ ಗುಣಮುಖವಾಗಲೆಂದು ಪ್ರಾರ್ಥಿಸಿದೆ. ಜಮ್ಮು ಕಾಶ್ಮೀರದಲ್ಲಿ ಮುಂದುವರೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಎರಡು ದಶಕಗಳ ಬಳಿಕವೂ ಭಯೋತ್ಪಾದನೆಯನ್ನು ಮಟ್ಟ ಹಾಕಲು ಬಿಜೆಪಿ ವಿಫಲಾವಾಗಿದೆ. ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಮ್ಮು ಕಾಶ್ಮೀರ ಕಾಂಗ್ರೇಸ್ ಘಟಕದ ಉಪಾಧ್ಯಕ್ಷ ರವೀಂದ್ರ ಶರ್ಮಾ ತಿಳಿಸಿದ್ದಾರೆ.